Thursday 7 December 2017

ಸಾಲುಮರದ ತಿಮ್ಮಕ್ಕ ನಿಮಗೆ ನಮ್ಮ ಅನಂತ ಕೋಟಿ ನಮಸ್ಕಾರಗಳು :ಮರಗಳೇ ಮಕ್ಕಳು

ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.

ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ. ಇವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭ್ಯವಾಗದೆ ಹತ್ತಿರದ ಒಂದು ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡಿದರು. ಇವರು ಚಿಕ್ಕಯ್ಯ ಎಂಬ ಒಬ್ಬ ದನಕಾಯುವವರನ್ನು ಮದುವೆಯಾಗಿದ್ದು, ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.

ತಿಮ್ಮಕ್ಕ ಅವರ ಹಳ್ಳಿಯ ಬಳಿ ಆಲದ ಮರಗಳು ಹೇರಳವಾಗಿದ್ದವು. ತಿಮ್ಮಕ್ಕ ಮತ್ತು ಅವರ ಪತಿ ಈ ಮರಗಳಿಂದ ಸಸಿಗಳನ್ನು ಕಸಿಮಾಡಲು ಆರಂಭಿಸಿದರು. ಮೊದಲ ವರ್ಷದಲ್ಲಿ ಹತ್ತು ಸಸಿಗಳನ್ನು ನೆರೆಯ ಕುದೂರು ಹಳ್ಳಿಯ ಬಳಿ ೪ ಕಿ.ಮೀ. ಉದ್ದಳತೆಯ ದೂರ ನೆಡಲಾಯಿತು. ಹೀಗೆಯೇ ಎರಡನೇ ವರ್ಷ ಹದಿನೈದು ಮತ್ತು ಮೂರನೇ ವರ್ಷ ೨೦ ಸಸಿಗಳನ್ನು ನೆಡಲಾಯಿತು.

ಇವರು ಈ ಸಸಿಗಳನ್ನು ನೆಡಲು ತಮ್ಮ ಅತ್ಯಲ್ಪ ಆದಾಯವನ್ನೇ ಬಳಸಿದರು.ಈ ಗಂಡ-ಹೆಂಡಿರು ಸಸಿಗಳಿಗೆ ನೀರುಣಿಸಲು ಬಿಂದಿಗೆ ಕೊಳಗಗಳಲ್ಲಿ ನೀರನ್ನು ನಾಲ್ಕು ಕಿ.ಮೀ. ದೂರ ಸಾಗಿಸುತ್ತಿದ್ದರು. ಹಾಗೂ ಸಸಿಗಳನ್ನು ಮೇವಿನ ಜಾನುವಾರುಗಳ ಕಾಟದಿಂದ ತಪ್ಪಿಸಲು ಅವುಗಳ ಸುತ್ತ ಮುಳ್ಳು ಪೊದೆಗಳನ್ನು ಹೊದಿಸಿ ಕಾಪಾಡಿದರು. ಸಸಿಗಳು ಬೆಳೆಯಲು ನೀರಿನ ಅವಶ್ಯಕತೆಯಿರುವುದರಿಂದ, ಅವಗಳನ್ನು ಹೆಚ್ಚಾಗಿ ಮುಂಗಾರು ಮಳೆಯ ಕಾಲದಲ್ಲಿ ನೆಡಲಾಯಿತು.

ತಿಮ್ಮಕ್ಕನವರ ಸಾಧನೆಯ ಪಲಕ

ಮುಂದಿನ ಮುಂಗಾರಿನಷ್ಟು ಹೊತ್ತಿಗೆ ಈ ಎಲ್ಲ ಸಸಿಗಳು ಚೆನ್ನಾಗಿ ಬೇರು ಬಿಟ್ಟಿದ್ದವು. ಒಟ್ಟಾರೆ ೨೮೪ ಸಸಿಗಳನ್ನು ನೆಡಲಾಗಿ, ಇಂದಿಗೆ ಅವುಗಳ ಮೌಲ್ಯವು ಸುಮಾರು ೧೫ ಲಕ್ಷ ರೂಪಾಯಿಗಳೆಂದು ಅಂದಾಜು ಮಾಡಲಾಗಿದೆ.ಈ ಮರಗಳ ನಿರ್ವಹಣೆಯನ್ನು ಈಗ ಕರ್ನಾಟಕ ಸರ್ಕಾರವುವಹಿಸಿಕೊಂಡಿದೆ

No comments: